ಹಾಸನ: ಸಾಲ ವಸೂಲಾತಿಗಾಗಿ ಮನೆ ಬಳಿ ಬಂದು ಕುಳಿತು ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಮನೆಯಲ್ಲಿ ಗಂಡ ಇಲ್ಲಾ ಎಂದರೂ ಗರ್ಭಿಣಿ ಮಹಿಳೆಗೆ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹಾಸನ ನಗರದ ವಲ್ಲಭಾಯಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಪತಿ ಶರಣ್ ಶ್ರೀನಿವಾಸ್,. ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ನಿಂದ 1 ಲಕ್ಷ ರೂ. ಸಾಲ ಪಡೆದಿದ್ದ. ಶರಣ್, ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಗಂಡ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯ ಬಳಿ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹಾಸನ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.