ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.
ಕಲೈಪುಲಿ ಎಸ್. ಧಾನು ನಿರ್ಮಾಣ ಮಾಡಿರುವ ‘ಮ್ಯಾಕ್ಸ್’ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಕಿಚ್ಚ ಸುದೀಪ್ ನಟಿಸಿರುವಈ ಸಿನಿಮಾ ತಂಡದಿಂದ ಒಂದು ಅಪ್ಡೇಟ್ ಸಿಕ್ಕಿದೆ. ‘ಸರೆಗಮ ಕನ್ನಡ’ ಯೂಟ್ಯೂಬ್ನಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್ ಕುರಿತು ಅಪ್ಡೇಟ್ ನೀಡಲಾಗಿದೆ.
ನವೆಂಬರ್ 27ರಂದು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ದೊಡ್ಡ ಅನೌನ್ಸ್ಮೆಂಟ್ ಆಗಲಿದೆ ಎಂದು ನಿರ್ಮಾಪಕರು ಹೇಳಿದ್ದಾರೆ. ಡಿಸೆಂಬರ್ 25ರಂದು ವಿಶ್ವಾದ್ಯಂತ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿದೆ.
2022ರ ಜುಲೈನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ತೆರೆಕಂಡಿತ್ತು. ಆ ನಂತರ ಸುದೀಪ್ ಅಭಿನಯದ ಯಾವುದೇ ಸಿನಿಮಾ ಬಿಡುಗಡೆ ಆಗಿರಲಿಲ್ಲ. ಈ ದೊಡ್ಡ ಗ್ಯಾಪ್ ಆಗಿದ್ದಕ್ಕೆ ಸುದೀಪ್ ಅವರ ಅಭಿಮಾನಿಗಳಿಗೆ ಬೇಸರ ಇದೆ. ‘ವಿಕ್ರಾಂತ್ ರೋಣ’ ನಂತರ ಸುದೀಪ್ ಒಪ್ಪಿಕೊಂಡ ಸಿನಿಮಾ ‘ಮ್ಯಾಕ್ಸ್’. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಕಳೆದ ವರ್ಷವೇ ಬಿಡುಗಡೆ ಆಗಬೇಕಿತ್ತು. ಹಲವಾರು ಕಾರಣಗಳಿಂದ ಈಗ ಸಿನಿಮಾ ತಡವಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾದ ಬಹುಪಾಲು ಚಿತ್ರೀಕರಣ ತಮಿಳುನಾಡಿನಲ್ಲಿ ನಡೆದಿದೆ.