ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದ, ಬೆಂಗಳೂರಿನಲ್ಲಿರುವ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ (JNCASR Recruitment 2025) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಜೂನ್ 8 ಕೊನೆಯ ದಿನವಾಗಿದೆ. ಹಾಗಾಗಿ, ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್
ಒಟ್ಟು ಹುದ್ದೆ: 02
ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್ I
ಸಂಬಳ: 31 ಸಾವಿರ ರೂಪಾಯಿ
ಯಾವುದೇ ಮಾನ್ಯ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಎಸ್ಸಿ ಸೇರಿ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 35 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳನ್ನು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಸಂದರ್ಶನ ನಡೆಸಲಾಗುತ್ತದೆ. ಇದಾದ ಬಳಿಕ ನೇಮಕಾತಿ ಆದೇಶ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ನೋಟಿಫಿಕೇಶನ್ ಓದಿಕೊಂಡ ಬಳಿಕ ಅಗತ್ಯ ದಾಖಲೆಗಳನ್ನು anand@jncasr.ac.in ಇ-ಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಅರ್ಜಿಯ ಸಮೇತ ಕಳುಹಿಸಬಹುದಾಗಿದೆ.