ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕೇಂದ್ರೀಯ ಆಯುರ್ವೇದ ವಿಜ್ಞಾನಗಳ ಸಂಶೋಧನಾ ಮಂಡಳಿಯ (CCRAS Recruitment 2025) ಕೇಂದ್ರ ಕಚೇರಿಯಲ್ಲಿ ಅಕೌಂಟ್ಸ್ ಆಫೀಸರ್ ಹಾಗೂ ಅಕೌಂಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಮುಂದಿನ 60 ದಿನಗಳೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕೇಂದ್ರ ಕಚೇರಿಯಲ್ಲಿ ಅಕೌಂಟ್ಸ್ ಆಫೀಸರ್ ಹಾಗೂ ಅಕೌಂಟಂಟ್ ತಲಾ ಒಂದು ಹುದ್ದೆ ಖಾಲಿ ಇದೆ. ಸಿಎ, ಬಿಕಾಂ, ಬಿಬಿಎಂ, ಎಂಬಿಎ, ಎಂಕಾಂ, ಹಣಕಾಸು ನಿರ್ವಹಣೆ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅಕೌಂಟ್ಸ್ ಆಫೀಸರ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 57,120 – 67,320 ರೂ. ಸಂಬಳ ನೀಡಲಾಗುತ್ತದೆ. ಅಕೌಂಟಂಟ್ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 44,900- 1,42,400 ರೂ. ಸಂಬಳ ಇದೆ.
ಅಭ್ಯರ್ಥಿಗಳಿಗೆ ಆಫ್ ಲೈನ್ ಮಾದರಿಯಲ್ಲಿ ಮಾತ್ರ ಅರ್ಜಿ ಹಾಕಲು ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದವರಿಗೆ ಹುದ್ದೆಗೆ ನಿಗದಿತ ವಿದ್ಯಾರ್ಹತೆ ಅಂಕಗಳ ಆಧಾರದಲ್ಲಿ, ಕಾರ್ಯಾನುಭವ ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಅವರನ್ನು ಸಂದರ್ಶನ, ದಾಖಲೆ ಪರಿಶೀಲನೆಗೆ ಕರೆದು, ಅಂತಿಮವಾಗಿ ಆಯ್ಕೆ ಮಾಡಲಾಗುವುದು. ಆಸಕ್ತರು www.ccras.nic.inಗೆ ಭೇಟಿ ನೀಡಿ ಅರ್ಜಿ ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಲ್ಲಿಸಬಹುದು. ಕೇಂದ್ರೀಯ ಆಯುರ್ವೇದ ವಿಜ್ಞಾನಗಳ ಸಂಶೋಧನಾ ಮಂಡಳಿಯು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಅಧೀನ ಸಂಸ್ಥೆಯಾಗಿದೆ.
ನೀಡಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಎಸ್ ಎಸ್ ಎಲ್ ಸಿ ಅಂಕಪಟ್ಟಿ
ಬರ್ತ್ ಸರ್ಟಿಫಿಕೇಟ್
ಹುದ್ದೆಗೆ ನಿಗದಿತ ವಿದ್ಯಾರ್ಹತೆ ದಾಖಲೆ
ಕೆಲಸದ ಅನುಭವ ಹೊಂದಿದ ದಾಖಲೆ
ಇ-ಮೇಲ್ ವಿಳಾಸ
ಮೊಬೈಲ್ ನಂಬರ್
ಇತರೆ ವೈಯಕ್ತಿಕ ಮಾಹಿತಿ