ಬೆಂಗಳೂರು: ನಗರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಾರತ್ತಹಳ್ಳಿ ರಿಂಗ್ ರೋಡ್‌ನ ಸಕ್ರಾ ಆಸ್ಪತ್ರೆ ಸಮೀಪ ಘಟನೆ ನಡೆದಿದೆ.
ಸಕ್ರಾ ಆಸ್ಪತ್ರೆಯ ಹಿಂಭಾಗದಲ್ಲಿರುವ ಲೇಬರ್ ಶೆಡ್‌ಗಳ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಎರಡು ಶೆಡ್‌ಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ : ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ



















