ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿರುವ, ಕೇಂದ್ರ ಸರ್ಕಾರದ ಅಧೀನದ ಸೆಂಟ್ರಲ್ ಪವರ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ಎರಡು ರಿಸರ್ಚ್ ಅಸೋಸಿಯೇಟ್ (CPRI Recruitment 2025) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಇ ಅಥವಾ ಎಂ.ಟೆಕ್ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. 30 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಸಿಪಿಆರ್ ಐ ವೆಬ್ ಸೈಟ್ ಆಗಿರುವ https://cpri.res.in/ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಡೌನ್ ಲೋಡ್ ಮಾಡಿಕೊಂಡ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಆಫ್ ಲೈನ್ ಮೂಲಕ ಕಳುಹಿಬೇಕು. ಅರ್ಜಿ ಕಳುಹಿಸುವ ವಿಳಾಸ- Chief Administrative Officer, Central Power Research Institute (CPRI), Post Box No. 8066, Prof. Sir C.V. Raman Road, Sadashivanagar Post Office, Bangalore – 560080.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಆರಂಭದಲ್ಲಿ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಇನ್ನೊಂದು ವರ್ಷ ವಿಸ್ತರಣೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.