ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಕ್ಯುರೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 02
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 17
ಒಂದು ಕ್ಯುರೇಟರ್ ಹಾಗೂ ಒಂದು ಅಸಿಸ್ಟಂಟ್ ಕ್ಯುರೇಟರ್ ಹುದ್ದೆ ಖಾಲಿ ಇದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಕೌಶಲ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40-50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
“ಅರ್ಜಿ ಸಲ್ಲಿಸುವುದು ಹೇಗೆ?”
ಅಭ್ಯರ್ಥಿಗಳು ಮೊದಲಿಗೆ nimhans.ac.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟ್‌ಔಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ museumnimhans@gmail.com ಇ-ಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.