ದೆಹಲಿ : 2026ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ 20 ತಂಡಗಳ ಹೆಸರು ಖಚಿತವಾಗಿದೆ. ಮಸ್ಕತ್‌ನಲ್ಲಿ ನಡೆದ ಟಿ20 ವಿಶ್ವಕಪ್ ಏಷ್ಯಾ ಮತ್ತು ಪೂರ್ವ ಏಷ್ಯಾ-ಪೆಸಿಫಿಕ್ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುಎಇ ತಂಡ ಜಪಾನ್ ತಂಡವನ್ನು ಸೋಲಿಸಿ 20ನೇ ತಂಡವಾಗಿ ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಪಾನ್ ತಂಡ 116 ರನ್ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ್ದ ಯುಎಇ ಸುಲಭವಾಗಿ ಗೆಲುವು ಸಾಧಿಸಿ 2026 ರ ಟಿ20 ವಿಶ್ವಕಪ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು.
20 ತಂಡಗಳ ನಡುವೆ ಪ್ರಶಸ್ತಿಗಾಗಿ ಫೈಟ್
ಕಳೆದ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಅಮೆರಿಕ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೂಪರ್ 8 ತಲುಪುವ ಮೂಲಕ ಮುಂದಿನ ಆವೃತ್ತಿಗೆ ಅರ್ಹತೆ ಪಡೆದಿದ್ದವು. ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಶ್ರೇಯಾಂಕದ ಆಧಾರದ ಮೇಲೆ ತಮ್ಮ ಸ್ಥಾನಗಳನ್ನು ಪಡೆದುಕೊಂಡಿವೆ. ಕೆನಡಾ ಅಮೆರಿಕದ ಅರ್ಹತಾ ಸುತ್ತಿನಿಂದ ಅರ್ಹತೆ ಪಡೆದರೆ, ಇಟಲಿ ಮತ್ತು ನೆದರ್ಲ್ಯಾಂಡ್ಸ್ ಯುರೋಪಿಯನ್ ಅರ್ಹತಾ ಸುತ್ತಿನಿಂದ ಅರ್ಹತೆ ಪಡೆದಿವೆ. ನಮೀಬಿಯಾ ಮತ್ತು ಜಿಂಬಾಬ್ವೆ ಆಫ್ರಿಕಾ ಅರ್ಹತಾ ಸುತ್ತಿನಿಂದ ಅರ್ಹತೆ ಪಡೆದಿವೆ. ಮತ್ತೊಂದೆಡೆ, ಭಾರತ ಮತ್ತು ಶ್ರೀಲಂಕಾ ಆತಿಥೇಯರಾಗಿ ತಮ್ಮ ಸ್ಥಾನಗಳನ್ನು ಪಡೆದುಕೊಂಡಿವೆ.