ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ದೇಶಾದ್ಯಂತ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ ಆಧಾರ್ ಮೇಲ್ವಿಚಾರಕ ಅಥವಾ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 203 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 1 ಕೊನೆಯ ದಿನವಾಗಿದೆ. ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಕರ್ನಾಟಕದಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದರ ಮಾಹಿತಿ ಹೀಗಿದೆ ನೋಡಿ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಹುದ್ದೆಗಳು: 203
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 01
ಉದ್ಯೋಗ ಸ್ಥಳ: ದೇಶಾದ್ಯಂತ
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕನಿಷ್ಠ 18 ವರ್ಷ ದಾಟಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು ಸೇರಿ ದೇಶದ ಹಲವು ರಾಜ್ಯಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಮೂರು ಹುದ್ದೆಗಳು ಖಾಲಿ ಇವೆ. ಆಸಕ್ತಿ ಇರುವ ಅಭ್ಯರ್ಥಿಗಳು csc.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.