ಬೆಂಗಳೂರು: ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಇಲ್ಲಿಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ(Kempegowda Airport) ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಾಕ್ ನಿಂದ ಅಕ್ರಮವಾಗಿ 23 ಕೆಜಿ ಗಾಂಜಾ ತಂದಿದ್ದ ಮೂವರನ್ನು ಬಂಧಿಸಲಾಗಿದೆ.
ಬಂಧಿತ ಮೂವರು ಬ್ಯಾಂಕಾಕ್ನಿಂದ ಅಕ್ರಮವಾಗಿ 23 ಕೆಜಿಯ ಹೈಡ್ರೋಪೋನಿಕ್ಸ್,(Hydroponics)ಮೈರವಾನ್ ಮತ್ತು ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾವನ್ನು ಪ್ರತ್ಯೇಕ ಕವರ್ ಗಳಲ್ಲಿ ತಂದಿದ್ದಾರೆ. ಪರಿಶೀಲನೆ ಸಂದರ್ಭದಲ್ಲಿ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದ್ದಾರೆ.