ಬೆಂಗಳೂರು: ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 23 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಡಿಕಲ್ ಆಫೀಸರ್, ನರ್ಸ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
“ಹುದ್ದೆಗಳ ವಿವರ”
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ
ಹುದ್ದೆ ಹೆಸರು: ಮೆಡಿಕಲ್ ಆಫೀಸರ್, ನರ್ಸ್
ಒಟ್ಟು ಹುದ್ದೆ: 23
ಉದ್ಯೋಗ ಸ್ಥಳ: ಉಡುಪಿ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 16
ಎನ್ ಸಿಡಿ ಕಾರ್ಡಿಯಾಲಜಿಸ್ಟ್ ಸ್ಪೆಷಲಿಸ್ಟ್, ಫಿಜಿಶಿಯನ್, ಮೆಡಿಕಲ್ ಆಫೀಸರ್, ನರ್ಸ್, ಜೂನಿಯರ್ ಹೆಲ್ತ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿಎಸ್ಸಿ, ಎಂಬಿಬಿಎಸ್, ಎಂಡಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
“ಅರ್ಜಿ ಸಲ್ಲಿಸುವುದು ಹೇಗೆ?”
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ udupi.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿ, ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ Office of District Health and Family Welfare Officer, District Project Management Unit, NHM Udupi District, Karnataka ವಿಳಾಸಕ್ಕೆ ಕಳುಹಿಸಬೇಕು.