ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (ಸಿಬಿಡಿಟಿ) 24 ಹಿರಿಯ ಭಾಷಾಂತರ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಆದಾಯ ತೆರಿಗೆ ಇಲಾಖೆಯ ಗುಜರಾತ್, ಕರ್ನಾಟಕ, ಗೋವಾ, ಒಡಿಶಾ, ಎನ್ಡಬ್ಲ್ಯೂಆರ್, ತಮಿಳುನಾಡು, ಪುದುಚೇರಿ, ದೆಹಲಿ, ಕೇರಳ, ಮುಂಬೈ, ಪುಣೆಯ ಘಟಕಗಳಲ್ಲಿ ಕೆಲಸ ಮಾಡಲು ಸಿದ್ಧರಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 26ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮೇ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ https://incometaxindia.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸೆಸ್ ಖಾಲಿ ಇರುವ ಅಗತ್ಯ ಹಿರಿಯ ಭಾಷಾಂತರ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು, ನೇರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿಗೆ ಮೇ 18, 2025 ರವರೆಗೆ ಅವಕಾಶ ನೀಡಲಾಗಿದೆ. ನೀವು ಸಹ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದ್ದರೆ, ಅರ್ಹತೆ ಇದ್ದರೆ ಇನ್ನಷ್ಟು ಹೆಚ್ಚಿನ ವಿಷಯಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಹಾಕಿರಿ.
ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳು, ವಿಶ್ವವಿದ್ಯಾಲಯಗಳು, ಅಂಗೀಕೃತ ಸಂಶೋಧನಾ ಸಂಸ್ಥೆಗಳು, ಸರ್ಕಾರದ ಅಂಗಸಂಸ್ಥೆಗಳಲ್ಲಿ ಪೂರ್ಣಕಾಲಿಕ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ ಅನುಭವ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹಿಂದಿ ಹಾಗೂ ಇಂಗ್ಲಿಷ್ ನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಂಗ್ಲಿಷ್ ನಿಂದ ಹಿಂದಿಗೆ ಹಾಗೂ ಹಿಂದಿಯಿಂದ ಇಂಗ್ಲಿಷ್ ಗೆ ಅನುವಾದ ಮಾಡುವ ಕೌಶಲ ಇರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು ಎಂದು ಸಿಬಿಡಿಟಿ ತಿಳಿಸಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಆದಾಯ ತೆರಿಗೆ ನಿರ್ದೇಶನಾಲಯ (ಎಚ್ ಆರ್ ಡಿ), ಕೇಂದ್ರ ನೇರ ತೆರಿಗೆ ಮಂಡಳಿ, ಅಧಿಕೃತ ಭಾಷಾ ವಿಭಾಗ, ರೂಮ್ ನಂಬರ್ 401, ಎರಡನೇ ಮಹಡಿ, ಜವಾಹರ ಲಾಲ್ ನೆಹರು ಸ್ಟೇಡಿಯಂ, ಪ್ರಗತಿ ವಿಹಾರ್, ನವದೆಹಲಿ – 110003 ವಿಳಾಸಕ್ಕೆ ಕಳುಹಿಸಬಹುದು. ಇ-ಮೇಲ್ ಮೂಲಕ ಸಾಫ್ಟ್ ಕಾಪಿಯನ್ನು delhi.dd.ol.hq.admin@incometax.gov.in ಇಮೇಲ್ ಐಡಿಗೆ ಅರ್ಜಿಯ ಸಾಫ್ಟ್ ಕಾಪಿಯನ್ನು ಕಳುಹಿಸಬಹುದಾಗಿದೆ.