ಬೆಂಗಳೂರು: ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಷ್ಟ್ರೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 24 ವಿವಿಧ ಹುದ್ದೆಗಳ ಭರ್ತಿಗಾಗಿ (National Science Centre Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಟೆಕ್ನಿಶಿಯನ್ ಎ, ಆರ್ಟಿಸ್ಟ್ ಎ, ಎಜ್ಯುಕೇಷನ್ ಅಸಿಸ್ಟಂಟ್, ಟೆಕ್ನಿಕಲ್ ಅಸಿಸ್ಟಂಟ್ ಎ ಸೇರಿ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಆಗಸ್ಟ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ವಿಜ್ಞಾನ ಸಂಸ್ಥೆ (NSC)
ಒಟ್ಟು ಹುದ್ದೆಗಳು: 24
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 30
ಉದ್ಯೋಗ ಸ್ಥಳ: ದೆಹಲಿ, ಲಖನೌ, ಕುರುಕ್ಷೇತ್ರ
ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಎಸ್ಸೆಸ್ಸೆಲ್ಸಿ, ಫೈನ್ ಆರ್ಟ್ಸ್, ಡಿಪ್ಲೋಮಾ, ಬಿಎಸ್ಸಿ, ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 19,900-92,300 ರೂಪಾಯಿವರೆಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.
ಆಪ್ಟಿಟ್ಯೂಡ್ ಟೆಸ್ಟ್ ಹಾಗೂ ಸ್ಕಿಲ್ ಟೆಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 885 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕವಿಲ್ಲ. ನೇರವಾಗಿ ಅರ್ಜಿ ಸಲ್ಲಿಸಲು https://bitm.online/nscd-recruitment ಲಿಂಕ್ ಮೇಲೆ ಕ್ಲಿಕ್ ಮಾಡಬಹುದಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಟೆಕ್ನಿಶಿಯನ್ ಎ – 18
ಆರ್ಟಿಸ್ಟ್ ಎ- 03
ಎಜ್ಯುಕೇಷನ್ ಅಸಿಸ್ಟಂಟ್- 01
ಟೆಕ್ನಿಕಲ್ ಅಸಿಸ್ಟಂಟ್ ಎ (ಎಲೆಕ್ಟ್ರಿಕಲ್)- 01
ಎಕ್ಸಿಬಿಷನ್ ಅಸಿಸ್ಟಂಟ್ ಎ- 01
ಒಟ್ಟು 24