ಬೆಂಗಳೂರು: ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC Recruitment 2025)ನಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನವಾಗಿದೆ. ಅಸಿಸ್ಟಂಟ್ ಮ್ಯಾನೇಜರ್, ಡೇಟಾ ಅನಾಲಿಸ್ಟ್ ಹುದ್ದೆಗಳಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಡಿಜಿಟಲ್ ಇಂಡಿಯಾ ಕಾರ್ಪೊರೇಷನ್
ಒಟ್ಟು ಹುದ್ದೆಗಳು: 24
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 24
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಅದರಲ್ಲೂ, ಬಿಎಸ್, ಬಿಎಸ್ಸಿ, ಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್, ಎಂಬಿಎ ಕೋರ್ಸ್ ಗಳನ್ನು ಅಧ್ಯಯನ ಮಾಡಿರಬೇಕು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ https://dic.gov.in/ ಗೆ ಭೇಟಿ ನೀಡಬೇಕು
DIC ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಮ್ಯಾನೇಜರ್, ಡೇಟಾ ಅನಾಲಿಸ್ಟ್ ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















