ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 250 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. 250 ವೆಲ್ತ್ ಮ್ಯಾನೇಜರ್ ಗಳ ನೇಮಕಾತಿಗಾಗಿ ಬ್ಯಾಂಕ್ ಅಧಿಸೂಚನೆ ಹೊರಡಿಸಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 25 ಕೊನೆಯ ದಿನವಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 250
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 25
ಉದ್ಯೋಗ ಸ್ಥಳ: ದೇಶಾದ್ಯಂತ
ವಿದ್ಯಾರ್ಹತೆ ಏನು?
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ, ಎಂಬಿಎ, ಎಂಎಂಎಸ್, ಪಿಜಿಡಿಬಿಎ, ಪಿಜಿಡಿಎಂ ಕೋರ್ಸ್ ಗಳನ್ನು ಮುಗಿಸಿದವರಿಗೆ ಒಳ್ಳೆಯ ಅವಕಾಶವಿದೆ. ಕನಿಷ್ಠ 25-35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 177 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್, ಒಬಿಸಿಯವರಿಗೆ 1,180 ರೂಪಾಯಿ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 64,820 ರೂಪಾಯಿಯಿಂದ 93,960 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಪರೀಕ್ಷೆ, ಗುಂಪು ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು unionbankofindia.co.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



















