ಬೆಂಗಳೂರು: ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಬರೋಬ್ಬರಿ 2,500 ಹುದ್ದೆಗಳ ನೇಮಕಾತಿಗಾಗಿ (BOB Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಮಾನದಂಡಗಳು
- ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದಿರಬೇಕು.
- 2025ರ ಜುಲೈ 1ಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 21-30 ವರ್ಷದೊಳಗಿರಬೇಕು.
- ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಗುಂಪು ಚರ್ಚೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
- ವಯೋಮಿತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ.
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್ಸೈಟ್ https://www.bankofbaroda.in/ ಗೆ ಭೇಟಿ ನೀಡಬೇಕು
- ಅರ್ಜಿ ಸಲ್ಲಿಸಲಿರುವ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಬೇಕು.
- ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಅಧಿಸೂಚನೆ ಓಪನ್ ಮಾಡಿ, ಅದನ್ನು ಓದಬೇಕು.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.