ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

26/11 Mumbai Attack: 26/11 ದಾಳಿಯ ಮಾಸ್ಟರ್‌ಮೈಂಡ್, ಉಗ್ರ ತಹಾವೂರ್ ರಾಣಾನನ್ನು ಹೊತ್ತ ವಿಮಾನ ಭಾರತದತ್ತ ಪಯಣ

April 9, 2025
Share on WhatsappShare on FacebookShare on Twitter

ನವದೆಹಲಿ: 2008ರ ಮುಂಬೈ ಭಯೋತ್ಪಾದಕ ದಾಳಿ(26/11 Mumbai Attack)ಯ ಸಂಚುಕೋರರಲ್ಲಿ ಒಬ್ಬನಾದ ಉಗ್ರ ತಹಾವೂರ್ ರಾಣಾನನ್ನು ಅಮೆರಿಕ ಸರ್ಕಾರವು ಭಾರತಕ್ಕೆ ಗಡೀಪಾರು ಮಾಡಿದೆ. ಈತನನ್ನು ಹೊತ್ತ ವಿಶೇಷ ವಿಮಾನವು ಅಮೆರಿಕದಿಂದ ಹೊರಟಿದ್ದು, ಇಂದು ರಾತ್ರಿ ಅಥವಾ ನಾಳೆ ಬೆಳಗಿನ ಜಾವ ನವದೆಹಲಿಗೆ ಬಂದಿಳಿಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದಲ್ಲಿ ಆತನಿಗಿದ್ದ ಎಲ್ಲ ಕಾನೂನು ಆಯ್ಕೆಗಳೂ ಮುಗಿದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ರಾಣಾನನ್ನು ಗಡೀಪಾರು ಮಾಡಿದೆ.

ಭಾರತಕ್ಕೆ ಗಡೀಪಾರು ಮಾಡುವುದನ್ನು ತಡೆಯುವಂತೆ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. “ಮುಖ್ಯ ನ್ಯಾಯಮೂರ್ತಿಯನ್ನು ಉದ್ದೇಶಿಸಿ, ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ಕಳುಹಿಸಲಾದ ಅರ್ಜಿಯನ್ನು ತಿರಸ್ಕರಿಸಲಾಗಿದೆ” ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶದಲ್ಲಿ ತಿಳಿಸಿತ್ತು.

ಮಾರ್ಚ್ ನಲ್ಲೂ ಯುಎಸ್ ಸುಪ್ರೀಂ ಕೋರ್ಟ್ ಇದೇ ಮಾದರಿಯ ಅರ್ಜಿಯನ್ನು ನಿರಾಕರಿಸಿತ್ತು. ತಾನು ಕಿಬ್ಬೊಟ್ಟೆಯ ಅಯೋರ್ಟಿಕ್ ಅನೂರಿಸಂನಿಂದ ಬಳಲುತ್ತಿದ್ದು, ಅದು ಹೆಚ್ಚಾಗುವ ಅಪಾಯವಿದೆ, ಇದಲ್ಲದೇ ಪಾರ್ಕಿನ್ಸನ್ ಕಾಯಿಲೆ ಮತ್ತು ಮೂತ್ರಕೋಶದ ಕ್ಯಾನ್ಸರ್ ಗೆ ಸಂಬಂಧಿಸಿದ ಸಮಸ್ಯೆಯಿಂದಲೂ ಬಳಲುತ್ತಿದ್ದೇನೆ. ಹೀಗಾಗಿ ಭಾರತಕ್ಕೆ ತನ್ನನ್ನು ಗಡೀಪಾರು ಮಾಡಬಾರದು ಎಂದು ರಾಣಾ ಈ ಹಿಂದೆ ಅಮೆರಿಕದ ಕೋರ್ಟ್ ಗೆ ಮನವಿ ಮಾಡಿದ್ದ. ಅಲ್ಲದೇ, ಭಾರತದಲ್ಲಿ ವಿಚಾರಣೆಗೆ ಒಳಗಾಗುವಷ್ಟು ಕಾಲ ನಾನು ಬದುಕುವುದಿಲ್ಲ. ನಾನೊಬ್ಬ ಪಾಕಿಸ್ತಾನಿ. ಹಾಗಾಗಿ ರಾಷ್ಟ್ರೀಯ, ಧಾರ್ಮಿಕ ಮತ್ತು ಸಾಂಸ್ಕೃತಿಕ ದ್ವೇಷದಿಂದ ಭಾರತದಲ್ಲಿ ನನ್ನನ್ನು ಗುರಿಯಾಗಿಸಿ ಹಿಂಸಿಸುವ ಸಾಧ್ಯತೆಯಿದೆ ಎಂದೂ ಆತ ಅರ್ಜಿಯಲ್ಲಿ ಮನವಿ ಮಾಡಿದ್ದ. ಆದರೆ, ಆತನ ಎಲ್ಲ ಕೋರಿಕೆಗಳನ್ನೂ ನ್ಯಾಯಾಲಯ ತಿರಸ್ಕರಿಸಿತ್ತು.

ಕಳೆದ ಫೆಬ್ರವರಿಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ವೇಳೆ ನಡೆದಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿಯೂ, ಆತನಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದಾಗಿಯೂ ಘೋಷಿಸಲಾಗಿತ್ತು.

2008ರ ನವೆಂಬರ್ 26ರಂದು ಮುಂಬೈನಲ್ಲಿ ನಡೆದ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯ ಸಹಚರನೇ ಈ ತಹಾವುರ್ ರಾಣಾ. ಈತ ಪಾಕಿಸ್ತಾನಿ ಮೂಲದ ಉದ್ಯಮಿ ಹಾಗೂ ವೈದ್ಯ. ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ಪಾಕ್ ಐಎಸ್ಐ ಜತೆ ಈತ ನಂಟು ಹೊಂದಿದ್ದ.

ಅಮೆರಿಕದ ನ್ಯಾಯಾಲಯವು ರಾಣಾನನ್ನು ದಾಳಿಗೆ ಭೌತಿಕ ಬೆಂಬಲ ನೀಡಿದ ಆರೋಪದಿಂದ ಖುಲಾಸೆಗೊಳಿಸಿತ್ತು. ಆದರೆ ಆತನ ಮೇಲಿದ್ದ ಇತರೆ ಎರಡು ಆರೋಪಗಳು ಸಾಬೀತಾದ ಕಾರಣ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಕೋವಿಡ್ ಸಾಂಕ್ರಾಮಿಕ ರೋಗದ ನಂತರ ರಾಣಾ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಆತನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ನಂತರದಲ್ಲಿ ಆತನನ್ನು ಭಾರತಕ್ಕೆ ಗಡೀಪಾರು ಮಾಡಲೆಂದು ಮತ್ತೆ ಬಂಧಿಸಲಾಗಿತ್ತು. ಗಡೀಪಾರು ನಿರ್ಧಾರವನ್ನು ಪ್ರಶ್ನಿಸಿ ರಾಣಾ ಅಮೆರಿಕದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ. ಆದರೆ, ಸುಪ್ರೀಂ ಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸುವ ಮೂಲಕ, ಆತನಿಗಿದ್ದ ಎಲ್ಲ ಕಾನೂನು ಆಯ್ಕೆಗಳೂ ಕಳೆದ ಸೋಮವಾರ ಮುಗಿದಿದ್ದವು.

26/11 ಮುಂಬೈ ದಾಳಿ:
2008ರ ನವೆಂಬರ್ 26ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ವಾಣಿಜ್ಯ ನಗರಿ ಮುಂಬೈ 10 ಮಂದಿ ಲಷ್ಕರ್ ಭಯೋತ್ಪಾದಕರು ಪ್ರವೇಶ ಪಡೆದಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ತಾಜ್, ಒಬೆರಾಯ್, ಸಿಎಸ್ಟಿ ಸೇರಿದಂತೆ ಮುಂಬೈನ ವಿವಿಧ ಭಾಗಗಳಿಗೆ ಮುತ್ತಿಗೆ ಹಾಕಿ, ಬಾಂಬ್ ಸ್ಫೋಟ ನಡೆಸಿ, ಗುಂಡಿನ ಮಳೆಗರೆದಿದ್ದರು. ಇಡೀ ದೇಶವನ್ನೇ ನಡುಗಿಸಿದ್ದ ಈ ದಾಳಿಯಲ್ಲಿ ಪಾಕ್ ಉಗ್ರರು ಬರೋಬ್ಬರಿ 166 ಮಂದಿ ಅಮಾಯಕರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ಈ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಮಾಸ್ಟರ್ ಮೈಂಡ್ ಗಳಲ್ಲಿ ತಹಾವುರ್ ರಾಣಾ ಕೂಡ ಒಬ್ಬ ಎಂದು ಭಾರತ ಆರೋಪಿಸಿತ್ತು.

Tags: 26/11 Accused26/11 Mumbai AttackTahawwur Rana
SendShareTweet
Previous Post

Repo Rate: ರೆಪೊ ದರ ಶೇ.0.25 ಇಳಿಕೆ: ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಇಳಿಕೆ ಸಾಧ್ಯತೆ

Next Post

AAI Recruitment 2025: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 89 ಹುದ್ದೆಗಳು; ಇಂದೇ ಅರ್ಜಿ ಸಲ್ಲಿಸಿ

Related Posts

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್
ದೇಶ

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!
ದೇಶ

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ
ದೇಶ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!
ದೇಶ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!

ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!
ದೇಶ

ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!
ದೇಶ

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

Next Post
AAI Recruitment 2025: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 89 ಹುದ್ದೆಗಳು; ಇಂದೇ ಅರ್ಜಿ ಸಲ್ಲಿಸಿ

AAI Recruitment 2025: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 89 ಹುದ್ದೆಗಳು; ಇಂದೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat