ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇದೀಗ ಪ್ರಕಟವಾಗಿದ್ದು, ದಾಖಲೆ ಮಟ್ಟದಲ್ಲಿ ಪಿಯುಸಿ ಫಲಿತಾಂಶ ಏರಿಕೆ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ವರ್ಷ ಶೇ. 86 ರಷ್ಟು ಫಲಿತಾಂಶದ ದಾಖಲಾಗಿದ್ದು, ಕಳೆದ ವರ್ಷ 73.45 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ವರ್ಷ ಶೇಕಡ 12.55ಕ್ಕಿಂತ ಹೆಚ್ಚು ಫಲಿತಾಂಶ ದಾಖಲು ಆಗಿದೆ.
ಅಲ್ಲದೆ ಪರೀಕ್ಷೆಗೆ ಹಾಜರಾದವರ ವಿದ್ಯಾರ್ಥಿಗಳ ಪೈಕಿ ಶೇಕಡ 86 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. ಪಿಯುಸಿ ಪರೀಕ್ಷೆಗೆ ಒಟ್ಟು 7, 10,363 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ನೋಂದಣಿ ಆದವರ ಪೈಕಿ 6,10,000 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ದಾಖಲೆಯ ಮಟ್ಟದಲ್ಲಿ ಪಿಯುಸಿ ಫಲಿತಾಂಶದಲ್ಲಿ ಏರಿಕೆ ಆಗಿದೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.
ಸಾಮಾನ್ಯವಾಗಿ ಫಲಿತಾಂಶ ಪ್ರಕಟವಾದ ತಕ್ಷಣ ಲಕ್ಷಾಂತರ ವಿದ್ಯಾರ್ಥಿಗಳು ಒಮ್ಮೆಗೆ ಅಧಿಕೃತ ವೆಬ್‌ಸೈಟ್‌ಗಳ ಮೇಲೆ ಮುಗಿಬೀಳುತ್ತಾರೆ. ಇದರಿಂದ ಸರ್ವರ್ ಸಮಸ್ಯೆ ಅಥವಾ ಪೇಜ್ ಲೋಡ್ ಆಗಲು ಬಹಳ ಸಮಯ ತೆಗೆದುಕೊಳ್ಳುವುದು ಮಾಮೂಲಿ. ಆದರೆ ಈ ಬಾರಿ ನೀವು ವೆಬ್‌ಸೈಟ್ ಓಪನ್ ಆಗುವವರೆಗೆ ಕಾಯಬೇಕಾದ ಅಗತ್ಯವಿಲ್ಲ.
ಡಿಜಿಲಾಕರ್ ಮೂಲಕವೇ ನೇರವಾಗಿ ಅಂಕಪಟ್ಟಿ ಡೌನ್ ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶ ಪಡೆಯಬಹುದು. ವೆಬ್‌ಸೈಟ್‌ಗಿಂತಲೂ ವೇಗವಾಗಿ ಮತ್ತು ಸುಲಭವಾಗಿ ನಿಮ್ಮ ಅಂಕಪಟ್ಟಿ ಪಡೆಯಲು ನಿಮ್ಮ ಮೊಬೈಲ್ ನಲ್ಲಿ ‘DigiLocker’ ಡೌನ್‌ಲೋಡ್ ಮಾಡಿ. ಅಪ್ಲಿಕೇಶನ್ ಇಲ್ಲದಿದ್ದರೆ ನೇರವಾಗಿ digilocker.gov.in ವೆಬ್‌ಸೈಟ್‌ಗೂ ಭೇಟಿ ನೀಡಬಹುದು.
ಇದನ್ನೂ ಓದಿ : 2nd PUC Result – 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ!



















