ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ರೋಗ ಮಾಹಿತಿ ಮತ್ತು ಸಂಶೋಧನಾ ಕೇಂದ್ರ (NCDIR)ದಲ್ಲಿ ಖಾಲಿ ಇರುವ ಯುವ ವೃತ್ತಿಪರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 2 ಅರ್ಜಿ ಸ್ಲಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯು ಗರಿಷ್ಠ ವಯಸ್ಸು 35 ವರ್ಷಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 30,000-42,000 ರೂಪಾಯಿ ವೇತನವನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಹಾಗಾದರೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಹೆಚ್ಚಿನ ಮಾಹಿತಿ.
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್ಸೈಟ್ ಆಗಿರುವ https://ncdirindia.org/ ಗೆ ಭೇಟಿ ನೀಡಬೇಕು.
- ಅಧಿಸೂಚನೆ ಲಿಂಕ್ ನಿಂದ ಯುವ ವೃತ್ತಿಪರ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಬೇಕು.
- ಅರ್ಜಿ ಭರ್ತಿ ಮಾಡಿದ ಬಳಿಕ ನಿಗದಿತ ದಿನಾಂಕದೊಳಗೆ recruitment@ncdirindia.org ಇಮೇಲ್ ಐಡಿಗೆ ಕಳುಹಿಸಬೇಕು.