ಬೆಂಗಳೂರು: ಹಾಸನದ ಸಕಲೇಶಪುರದಲ್ಲಿರುವ, ಕೇಂದ್ರ ಸರ್ಕಾರದ ಅಧೀನದ ಮಸಾಲೆ ಮಂಡಲಿಯಲ್ಲಿ ಮೂರು ಸ್ಪೈಸಸ್ ರಿಸರ್ಚ್ ಟ್ರೈನಿಗಳ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಂಎಸ್ಸಿ ಓದಿದವರಿಗೆ ಆದ್ಯತೆ ನೀಡಲಾಗುತ್ತಿದೆ. ವಾಕ್ ಇನ್ ಇಂಟರ್ ವ್ಯೂ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಮೇ 1ರಂದು ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
https://www.indianspices.com/opportunities.html ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಗಮನಿಸಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದಲ್ಲಿ ನೀಡಿದ ಪ್ರದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. 30 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 21 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
ಸ್ಪೈಸಸ್ ಬೋರ್ಡ್, ಐಸಿಆರ್ ಐ, ರೀಜನಲ್ ಸ್ಟೇಷನ್ ದೋನಿಗಲ್, ಸಕಲೇಶಪುರ, ಹಾಸನ. ಬೆಳಗ್ಗೆ 10.30ಕ್ಕೆ ಸಂದರ್ಶನ ಆರಂಭವಾಗುತ್ತದೆ. ಸಂದರ್ಶನ ಮಾಡುವ ಜತೆಗೆ ಅಭ್ಯರ್ಥಿಯ ಕಂಪ್ಯೂಟರ್ ಜ್ಞಾನವನ್ನೂ ಪರಿಶೀಲನೆ ಮಾಡಲಾಗುತ್ತದೆ. ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮೊದಲ ವರ್ಷದ ಕಾರ್ಯಕ್ಷತೆಯ ಆಧಾರದ ಮೇಲೆ ಎರಡನೇ ವರ್ಷಕ್ಕೆ ವಿಸ್ತರಣೆ ಮಾಡಲಾಗುತ್ತದೆ.
ಫೀಲ್ಡ್ ರೆಕಾರ್ಡಿಂಗ್ ವೇಳೆ ವಿಜ್ಞಾನಿಗಳಿಗೆ ನೆರವು ನೀಡುವುದು, ಕಂಪ್ಯೂಟರ್ ನಲ್ಲಿ ಡೇಟಾ ಸಂಗ್ರಹಿಸುವುದು, ಲ್ಯಾಬ್ ವರ್ಕ್ ಸೇರಿ ಹಲವು ಜವಾಬ್ದಾರಿಗಳನ್ನು ನೀಡಲಾಗುತ್ತದೆ. ಕಂಪ್ಯೂಟರ್ ಜ್ಞಾನ ಇರುವವರಿಗೆ ಮೊದಲ ಆದ್ಯತೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!