ಬೆಂಗಳೂರು: ಬೈಕ್ ನಲ್ಲಿ ಚಲಿಸ್ತಿದ್ದಾಗ ಮರ ಬಿದ್ದ ಪರಿಣಾಮ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಜೀವನಹಳ್ಳಿಯ ಪೂರ್ವ ಪಾರ್ಕ್ ಹತ್ತಿರ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ (Bengaluru) ಶನಿವಾರ ಸಂಜೆ ಸುರಿದ ಮಳೆಗೆ (Rain) ಮರವು ಬೈಕ್ (Bike) ಮೇಲೆ ಮುರಿದು ಬಿದ್ದಿದೆ. ಪರಿಣಾಮ ಮೂರು ವರ್ಷದ ಮಗು ಸಾವನ್ನಪ್ಪಿದೆ.
ರಕ್ಷಾ ಸಾವನ್ನಪ್ಪಿರುವ ಕಂದಮ್ಮ ಎನ್ನಲಾಗಿದೆ. ತಂದೆಯ ಜೊತೆ ಮಗು ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮರ ಬಿದ್ದು ಮಗುವಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಮಗುವನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.