ಬೆಂಗಳೂರು : ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಕಲಾಕೃತಿಯಯನ್ನು ಕೊಡುಗೆ ನೀಡಿದ್ದಾರೆ.
ಈ ಕುರಿತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ.ಅನಿಲ್ ಮಿಶ್ರಾ ಮಾಹಿತಿ ನೀಡಿದ್ದು, ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ನಿವಾಸಿ, ಹವ್ಯಾ ಸಿ ಕಲಾವಿದೆ ಜಯಶ್ರೀ ಫಣೀಶ್ ತಮ್ಮ ಕೈಯ್ಯಾರೆ ಇದನ್ನು ನಿರ್ಮಿಸಿ ನೀಡಿದ್ದಾರೆ.
ಚಿನ್ನದ ಎಲೆಯ ಹಾಳೆಗಳಿಂದ ಲೇಪಿತವಾಗಿರುವ, ಮಾಣಿಕ್ಯ, ಪಚ್ಚೆ, ಹವಳ, ಮುತ್ತು ಹಾಗೂ ವಜ್ರಗಳಿಂದ ಅಲಂಕರಿಸಲಾದ ಅಪರೂಪದ ಶ್ರೀರಾಮನ ಕಲಾಕೃತಿ ಅಯೋಧ್ಯೆ ಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಸಜ್ಜಾಗಿದೆ. ಈ ವಿಶಿಷ್ಟ ಕಲಾಕೃತಿಯನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ, ಹವ್ಯಾಸಿ ಕಲಾವಿದೆ ಜಯಶ್ರೀ ಫಣೀಶ್ ತಮ್ಮ ಕೈಯ್ಯಾರೆ ನಿರ್ಮಿಸಿದ್ದು, ಇದರ ಸಂಪೂರ್ಣ ಹಣಕಾಸು ಸಹಾಯವನ್ನು ಅವರ ಕುಟುಂಬವೇ ಒದಗಿಸಿದೆ ಎಂದು ಅವರು ತಿಳಿಸಿದ್ದಾರೆ.
ತಂಜಾವೂರು ಚಿತ್ರಕಲೆ ಶೈಲಿಯಿಂದ ಪ್ರೇರಣೆ ಪಡೆದ ಈ ರಾಮ ಕಲಾಕೃತಿಯನ್ನು 10 ಅಡಿ ಎತ್ತರ, 6 ಅಡಿ ಅಗಲ ಮತ್ತು 2.5 ಅಡಿ ಆಳ ಹೊಂದಿರುವ ತೇಗದ ಮರದ ಚೌಕಟ್ಟಿನಲ್ಲಿ ಅಳವಡಿಸಲಾಗಿದೆ. ಇದರಲ್ಲಿ ರಾಮನ ದೈವಿಕ ರೂಪದೊಂದಿಗೆ ಹನುಮಾನ್, ಗರುಡ ಹಾಗೂ ದಶಾವತಾರದ ಚಿತ್ರಣಗಳನ್ನು ಒಳಗೊಂಡಿರುವುದು ವಿಶೇಷ. ಕಲಾಕೃತಿಯು ವಿಗ್ರಹದಂತೆ ಕಾಣುವ ತ್ರಿಮಿತೀಯ ವಿನ್ಯಾಸವನ್ನು ಹೊಂದಿದೆ.
ಇದನ್ನೂ ಓದಿ : ಶಬರಿಮಲೆ ಚಿನ್ನ ಕಳ್ಳತನ ಕೇಸ್ | ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ SIT ದಾಳಿ



















