ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI ATC Recruitment 2025) ಏರ್ ಟ್ರಾಫಿಕ್ ಕಂಟ್ರೋಲರ್ ಇಲಾಖೆಯಲ್ಲಿ 309 ಜ್ಯೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೇ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಆಗಿರುವ www.aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಕೆಟಗರಿಯವರಿಗೆ ಒಂದು ಸಾವಿರ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಫಿಸಿಕ್ಸ್ ಹಾಗೂ ಮ್ಯಾತಮೆಟಿಕ್ಸ್ ನಲ್ಲಿ ಬಿಎಸ್ಸಿ ಅಧ್ಯಯನ ಮಾಡಿದವರು, ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಎಎಐ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೇಗೆ?
ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಇರುತ್ತದೆ. ಇದಾದ ನಂತರ ಧ್ವನಿ ಪರೀಕ್ಷೆ, ಮಾನಸಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಕ್ಷಮತೆ ತಪಾಸಣೆ ಮೂಲಕ ನೇಮಕಾತಿ ಮಾಡಲಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂ.ನಿಂದ 1.4 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 27 ವರ್ಷದ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷದ ಸಡಿಲಿಕೆ ಇದೆ. ಇಡಬ್ಲ್ಯೂಎಸ್ ನವರಿಗೆ 30, ಒಬಿಸಿ 72, ಎಸ್ಸಿ 55 ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 27 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಮೀಸಲಾತಿ ಇಲ್ಲದವರು ಅಥವಾ ಜನರಲ್ ಅಭ್ಯರ್ಥಿಗಳಿಗೆ 125 ಹುದ್ದೆಗಳನ್ನು ಮೀಸಲಿರಿಸಲಾಗಿದೆ.



















