ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ (AAI Senior Assistant Recruitment 2025) ಖಾಲಿ ಇರುವ 32 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೀನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 32 ಹುದ್ದೆಗಳು ಖಾಲಿ ಇದ್ದು, ಆಗಸ್ಟ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಹುದ್ದೆಯನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)
ಹುದ್ದೆಗಳ ಹೆಸರು: ಸೀನಿಯರ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 32
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 26
ಆಗಸ್ಟ್ 5ರ ನಂತರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 18-30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್, ರೇಡಿಯೋ ಎಂಜಿನಿಯರಿಂಗ್, ಬಿ.ಕಾಂ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.10 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಯಾವ ಹುದ್ದೆ ಎಷ್ಟು ಖಾಲಿ?
ಸೀನಿಯರ್ ಅಸಿಸ್ಟಂಟ್ (Electronics) NE-6 21
ಸೀನಿಯರ್ ಅಸಿಸ್ಟಂಟ್ (Accounts) NE-6 10
ಸೀನಿಯರ್ ಅಸಿಸ್ಟಂಟ್ (Official Language) NE-6 01
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ aai.aero ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಸರಿಯಾಗಿ ಓದಿದ ಬಳಿಕ, ಅರ್ಜಿ ವಿವರಗಳನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿದ ಬಳಿಕ ಅರ್ಜಿಯನ್ನು ಸಲ್ಲಿಸಬೇಕು.



















