ಮದ್ದೂರಿನ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ನಡೆಸಲಾಗಿತ್ತು. ಆ ಹಿನ್ನೆಲೆಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ವಿವಿಧ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ನಂತರ ಸ್ಥಳದಲ್ಲಿ ಅಕ್ರಮವಾಗಿ ಶೇಖರಣೆ ಮಾಡಿದ್ದ 320 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಿದ್ದಾರೆ. ಮದ್ದೂರು ತಾಲೂಕಿನ ತೂಬಿನಕೆರೆ, ನಿಲುವಾಗಿಲು, ತೊರೆಶೆಟ್ಟಿಹಳ್ಳಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು.
ಖಚಿತ ಮಾಹಿತಿ ಆಧರಿಸಿ, ಪೊಲೀಸ್, ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು ಸಂಗ್ರಹಣೆ ಮಾಡುತ್ತಿದ್ದವರ ವಿರುದ್ದ ಕೆಸ್ತೂರು ಹಾಗೂ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.