ಬೆಂಗಳೂರು: ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯುವ ಉದ್ಯೋಗ ಹಿಡಿದು ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಕರ್ನಾಟಕದ ಸುರತ್ಕಲ್ ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 34 ಹುದ್ದೆಗಳ (NIT Karnataka Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜುಲೈ 17ರಂದೇ ಅಧಿಸೂಚನೆ ಹೊರಡಿಸಲಾಗಿದೆ. ಜುಲೈ 28ರಂದು ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ
ಹುದ್ದೆ ಹೆಸರು : ಅಧ್ಯಾಪಕರು
ಒಟ್ಟು ಹುದ್ದೆ: 34
ಉದ್ಯೋಗ ಸ್ಥಳ : ಸುರತ್ಕಲ್
ವೆಬ್ ಸೈಟ್: nitk.ac.in
ಯಾವ ವಿಭಾಗದಲ್ಲಿ ಎಷ್ಟು ಹುದ್ದೆ ಖಾಲಿ?
ರಾಸಾಯನಿಕ ಎಂಜಿನಿಯರಿಂಗ್ : 01
ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ : 13
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ : 03
ಮಾಹಿತಿ ತಂತ್ರಜ್ಞಾನ : 08
ಗಣಿತ ಮತ್ತು ಕಂಪ್ಯೂಟೇಶನಲ್ ವಿಜ್ಞಾನ : 05
ಗಣಿ ಎಂಜಿನಿಯರಿಂಗ್ : 01
ಭೌತಶಾಸ್ತ್ರ : 01
ಮಾನವಶಾಸ್ತ್ರ, ಸಮಾಜ ವಿಜ್ಞಾನ ಮತ್ತು ನಿರ್ವಹಣೆ ಶಾಲೆ ಆನ್ ಲೈನ್ ಕೋರ್ಸ್ಗಳು : 02
ವಿದ್ಯಾರ್ಹತೆ ಏನು?
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ME ಅಥವಾ M.Tech, MCA ,M.Sc, MS,Ph.D ಕೋರ್ಸ್ ಪೂರ್ಣಗೊಳಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 55 ಸಾವಿರ ರೂಪಾಯಿಯಿಂದ 70 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಂದರ್ಶನ ವಿಳಾಸ
Board Room, Main Administrative Building, NITK,
Surathkal, Karnataka