ಭಾರತದ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನ್ನು ನ್ಯೂಜಿಲೆಂಡ್ ಮುಗಿಸಿದ್ದು, ಭಾರತಕ್ಕೆ 355 ರನ್ ಗಲ ಬೃಹತ್ ಗುರಿ ನೀಡಿದೆ.
2ನೇ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ ತಂಡವು 255 ರನ್ ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ದೊಡ್ಡ ಗುರಿ ನೀಡಲಾಗಿದೆ. ಇನ್ನೂ ಎರಡು ದಿನಗಳು ಬಾಕಿಯಿದ್ದು, ಭಾರತ ಸಮಾಧಾನವಾಗಿ ಆಡಿದರೆ, ಗೆಲ್ಲಬಹುದು. ಆದರೆ, ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯ ಹಾಗೂ ಎರಡನೇ ಪಂದ್ಯದ ಮೊಲ ಇನ್ನಿಂಗ್ಸ್ ನಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ವೈಫಲ್ಯ ಅನುಭವಿಸಿದೆ. ಇದನ್ನು ನೋಡಿದರೆ, ಭಾರತದ ಬ್ಯಾಟಿಂಗ್ ವಿಭಾಗ ಮತ್ತೆ ಹಳಿಗೆ ಬಂದರೆ ಮಾತ್ರ ಈ ಪಂದ್ಯ ಗೆಲ್ಲಬಹುದು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ಮೊದಲ ಇನಿಂಗ್ಸ್ ನಲ್ಲಿ 259 ರನ್ ಗಳಿಸಿತ್ತು. ಉತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಕೇವಲ 156 ರನ್ ಗಳಿಗೆ ಆಲೌಟ್ ಆಗಿದ್ದರು. ಮೊದಲ ಇನಿಂಗ್ಸ್ ನಲ್ಲಿ 103 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕಿವೀಸ್ ಪರ ನಾಯಕ ಟಾಮ್ ಲ್ಯಾಥಮ್ 133 ಎಸೆತಗಳಲ್ಲಿ 10 ಫೋರ್ ಗಳೊಂದಿಗೆ 86 ರನ್ ಗಳಿಸಿದ್ದರು.
ಟಾಮ್ ಬ್ಲಂಡೆಲ್ 41 ರನ್ ಸಿಡಿಸಿದರು. ಗ್ಲೆನ್ ಫಿಲಿಪ್ಸ್ ಅಜೇಯ 47 ರನ್ ಗಳಿಸಿದರು. ನ್ಯೂಜಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್ ನಲ್ಲಿ 255 ರನ್ ಗಳಿಸಿ ಆಲೌಟ್ ಆಗಿದೆ. ಭಾರತದ ಪರ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ಪಡೆದಿದ್ದ ವಾಷಿಂಗ್ಟನ್ ಸುಂದರ್ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಪಡೆದರು. ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.
ಮೊದಲ ಇನಿಂಗ್ಸ್ನಲ್ಲಿನ 103 ರನ್ ಗಳ ಹಿನ್ನಡೆ ಹೊಂದಿರುವ ಭಾರತ ತಂಡವು ದ್ವಿತೀಯ ಇನಿಂಗ್ಸ್ ನಲ್ಲಿ 355 ರನ್ ಗಳ ಗುರಿ ಪಡೆದುಕೊಂಡಿದೆ. ಎರಡುವರೆ ದಿನದಾಟಗಳು ಬಾಕಿಯಿದ್ದು, ಇದರೊಳಗೆ ಭಾರತ ತಂಡವು ಈ ಗುರಿ ಮುಟ್ಟಿದರೆ ಗೆಲುವು ತಮ್ಮದಾಗಿಸಿಕೊಳ್ಳಬಹುದು.
ಭಾರತ ಮೊದಲ ಟೆಸ್ಟ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದೆ. ಎರಡನೇ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿ ಆಸೆ ಜೀವಂತವಿರಿಸಿಕೊಳ್ಳಬಹುದು. ಹೀಗಾಗಿ ಭಾರತಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಆಗಿದೆ. ಈ ಪಂದ್ಯ ಗೆದ್ದರೆ ಮಾತ್ರ ಭಾರತ ತಂಡ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಬಹುದು.