ಬೆಂಗಳೂರು: ನೀವೂ ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬಯಸುತ್ತಿದ್ದೀರಾ? ಯಾವುದೇ ಪ್ರಕರಣಗಳನ್ನು ಭೇದಿಸುವ ಚಾಕಚಕ್ಯತೆ ನಿಮ್ಮಲ್ಲಿದೆಯೇ? ನೀವು ಪದವಿ ಕೋರ್ಸ್ ಮುಗಿಸಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗುಪ್ತಚರ ಇಲಾಖೆಯಲ್ಲಿ (Intelligence Bureau Recruitment 2025) ಖಾಲಿ ಇರುವ 3,717 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಬೇಸಿಕ್ ಕಂಪ್ಯೂಟರ್ ಜ್ಞಾನ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
18ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಬಹುದಾಗಿದೆ. ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,900 ರೂಪಾಯಿಯಿಂದ 1,42,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ mha.gov.in ಗೆ ಭೇಟಿ ನೀಡಬೇಕು.
- Intelligence Bureau ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಯ ಅಧಿಸೂಚನೆ ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















