ಮಂಗಳೂರು: 4 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮುಲ್ಕಿ ಆರ್‌ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ಹತ್ತಿರ ಈ ಘಟನೆ ನಡೆದಿದೆ. ಮಂಗಳೂರು ತಾಲೂಕು ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಬಲೆಗೆ ಬಿದ್ದ ಅಧಿಕಾರಿ. ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಜಿ.ಎಸ್.ದಿನೇಶ್ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರೂ ಒಂದು ವರ್ಷದಿಂದ ಕ್ರಮಕೈಗೊಂಡಿರಲಿಲ್ಲ. ಲಂಚಕ್ಕೆ ಬೇಡಿಕೆ ಸಂಬಂಧ ಮಂಗಳೂರು ಲೋಕಾಯುಕ್ತ ಕಚೇರಿಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದರು.