ಬೀದರ್ : ಹುಚ್ಚು ನಾಯಿ ದಾಳಿಗೆ ನಾಲ್ಕು ತಿಂಗಳ ಹೆಣ್ಣು ಮಗು ಬಲಿಯಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಶಿವಾನಿ ಸಿದ್ರಾಮ್ ಬೆನ್‌ಚಿಂಚೋಳಿ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಮನೆಯ ಪಡಸಾಲೆಯಲ್ಲಿ ಮಲಗಿದ್ದ ವೇಳೆ ಹುಚ್ಚು ನಾಯಿ ಮಗುವಿನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಮಗುವಿನ ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಮನಸ್ಸೋ ಇಚ್ಚೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ ಎನ್ನಲಾಗಿದೆ.
ತಕ್ಷಣ ಕುಟುಂಬಸ್ಥರು ಮಗುವನ್ನು ಚಿಕಿತ್ಸೆಗಾಗಿ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಗಂಭೀರ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಮಗು ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬ್ರಿಮ್ಸ್ ಆಸ್ಪತ್ರೆ ಮುಂದೆ ದುಃಖದ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಬಳಿಕ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನೂ ಓದಿ : ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನ ಕದ್ದ ಖತರ್ನಾಕ್ ಜೋಡಿ ಅರೆಸ್ಟ್!



















