ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಿ ಒಪ್ಪಂದಗಳಲ್ಲಿ ಮುಸ್ಲಿಂರಿಗೆ ಶೇ. ಮೀಸಲಾತಿ ನೀಡುವ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಒಪ್ಪಿಗೆಗಾಗಿ ಕಳುಹಿಸಿದ್ದಾರೆ.
ರಾಜ್ಯಪಾಲ ಗೆಹ್ಲೋಟ್ ಇಂದು ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಾಯ್ದಿರಿಸಿದ್ದಾರೆ. ಈ ವಿಧೇಯಕ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಹೋಗಿತ್ತು. ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗೆ ಕಳುಹಿಸಿದ್ದಾರೆ.
ಸಾರ್ವಜನಿಕ ಒಪ್ಪಂದಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ಮಾರ್ಚ್ ನಲ್ಲಿ ನಡೆದ ಅಧಿವೇಶನದಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿತು. ಬಿಜೆಪಿ ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷಗಳು ಈ ಮಸೂದೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದವು. ಈ ಮಸೂದೆಯನ್ನು ವಿರೋಧಿಸಿ ಎರಡೂ ಪಕ್ಷಗಳು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದವು.
ಧಾರ್ಮಿಕ ಗುಂಪುಗಳಿಗೆ ಕೋಟಾಕ್ಕೆ ಯಾವುದೇ ನಿಬಂಧನೆ ಇಲ್ಲದಿದ್ದರೂ, ಅವುಗಳನ್ನು ನಿರ್ದಿಷ್ಟ ಹಿಂದುಳಿದ ಸಮುದಾಯಗಳ ಸದಸ್ಯರಾಗಿ ಮೀಸಲಾತಿಗೆ ಸೇರಿಸಲಾಗಿದೆ.
ರಾಜ್ಯಪಾಲರು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿಕೊಂಡು ರಾಷ್ಟ್ರಪತಿಗಳಿಗೆ ಈ ಮಸೂದೆಯನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ.



















