ಮಂಡ್ಯ: ವಿದ್ಯುತ್ ತಂತಿ ಸ್ಪರ್ಶಿಸಿ 4 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯದ ಮಳವಳ್ಳಿ ತಾಲೂಕಿನ ಕೋಡಿಪುರ ಗ್ರಾಮದ ಬಳಿ ನಡೆದಿದೆ. ಕುರಿಗಾಹಿ ಸಿದ್ದರಾಮು ಎಂಬುವರಿಗೆ ಸೇರಿದ ಕುರಿಗಳಾಗಿದ್ದು, ಜಮೀನಿನಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದ ವೇಳೆ ವಿದ್ಯುತ್ ತಂತಿ ತುಳಿದು ದುರ್ಘಟನೆ ಸಂಭವಿಸಿದೆ.
ಕುರಿಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದು, ಪರಿಹಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸ್ಥಳಕ್ಕೆ ಚೆಸ್ಕಾಂನ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಲಾಗಿದ್ದು, ಪಶು ವೈದ್ಯರಿಂದ ಮೃತ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.