ಬೆಂಗಳೂರು: ಇಂಡಿಯನ್ ಓವರ್ ಸೀಸ್ ಬ್ಯಾಂಕ್ನಲ್ಲಿ (IOB) 400 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ ಇರುವ ಬ್ರ್ಯಾಂಚ್ ಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಮೇ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ಮಾಹಿತಿ
ಸಂಸ್ಥೆ ಹೆಸರು : ಇಂಡಿಯನ್ ಓವರ್ ಸೀಸ್ ಬ್ಯಾಂಕ್
ಒಟ್ಟು ಹುದ್ದೆಗಳು : 400
ಹುದ್ದೆ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ
ಉದ್ಯೋಗ ಸ್ಥಳ : ದೇಶಾದ್ಯಂತ ಇರುವ ಬ್ರ್ಯಾಂಚ್ ಗಳು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಮಮಡಳಿಯಿಂದ ಯಾವುದೇ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.
ಜನರಲ್, ಒಬಿಸಿ ಹಾಗೂ ಇಡಬ್ಲ್ಯೂಎಸ್ ನವರಿಗೆ 850 ರೂಪಾಯಿ ಅರ್ಜಿ ಶುಲ್ಕ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ 150 ರೂ. ಇದೆ. ಆನ್ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 48,480 ರೂ. ವೇತನ ನೀಡಲಾಗುತ್ತದೆ. www.iob.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.



















