ಮೈಸೂರು: ಬಿಜೆಪಿ ನಮ್ಮ ಸರ್ಕಾರ ಬೀಳಿಸುವ ಯತ್ನ ಮಾಡುತ್ತಿದೆ. ಇದಕ್ಕಾಗಿ ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಟಿ. ನರಸೀಪುರ ಕ್ಷೇತ್ರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಬಿಜೆಪಿ ಎಂದೂ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ. ಹಿಂದೆ 17 ಶಾಸಕರಿಗೆ ತಲಾ 25 ಕೋಟಿಯಿಂದ 30 ಕೋಟಿ ರೂ. ಕೊಟ್ಟು ಖರೀದಿ ಮಾಡಿದ್ದರು. ಈಗ 50 ಕೋಟಿ ರೂ. ಆಮಿಷವೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇವರು ಎಲ್ಲಿಂದ ಹಣ ಸಂಗ್ರಹಿಸುತ್ತಿದ್ದಾರೆ ಎಂಬುವುದೇ ತಿಳಿಯುತ್ತಿಲ್ಲ. ಇಷ್ಟೊಂದು ದುಡ್ಡು ಎಲ್ಲಿಂದ ತರುತ್ತಿದ್ದಾರೆ. ನಮ್ಮ ಶಾಸಕರು ಈ ಆಮಿಷಕ್ಕೆ ಬಗ್ಗದಿದ್ದಕ್ಕೆ ನನ್ನನ್ನೇ ಟಾರ್ಗೆಟ್ ಮಾಡಲಾಗಿದೆ. ಆದರೆ, ನನ್ನನ್ನು ಟಚ್ ಮಾಡಿದರೆ, ರಾಜ್ಯದ ಜನರು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.