ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಎಂಬ ಸಣ್ಣ ಗ್ರಾಮದ ಯುವಕ ಕಿರಣ್ ಕಮತೆ ಇಂದು ಈಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 53ನೇ ರ್‍ಯಾಂಕ್ ಪಡೆಯುವ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ.

ಇಂಜಿನಿಯರಿಂಗ್ ಪದವೀಧರರಾದ ಇವರು, ಯಾವುದೇ ಕೋಚಿಂಗ್ ಪಡೆಯದೆ ಮನೆಯಲ್ಲೇ ಕುಳಿತು ಓದಿ ಈ ಸಾಧನೆ ಮಾಡಿರುವುದು ವಿಶೇಷ.ಮೊದಲ ನಾಲ್ಕು ಪ್ರಯತ್ನಗಳಲ್ಲಿ ಸೋತರೂ ಧೃತಿಗೆಡದೆ, 5ನೇ ಪ್ರಯತ್ನದಲ್ಲಿ ತಮ್ಮIAS ಕನಸನ್ನು ನನಸು ಮಾಡಿಕೊಂಡಿದ್ದಾರೆ. ತಂದೆ ರೈತರು ಮತ್ತು ತಾಯಿ ಗೃಹಿಣಿ. ಮಗನ ಈ ಸಾಧನೆಯಿಂದ ಈಡೀ ಹತ್ತರವಟಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.
ಬೆಳಗಾವಿ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದಾರೆ.
ಐದು ಬಾರಿ ಪ್ರಿಲಿಮ್ಸ್ ಪಾಸಾಗಿದ್ದರೂ ಮೇನ್ಸ್ ಪರೀಕ್ಷೆಯಲ್ಲಿ ವಿಫಲವಾಗಿದ್ದರು. ಆರನೇ ಬಾರಿಗೆ ಯಶಸ್ಸುಕಂಡಿದ್ದಾರೆ. ಕಿರಣ ತಂದೆ ಸಣ್ಣಪ್ಪ ಕಮತೆ ಅವರು ನಿಡಸೋಸಿಯ ಹಿರಾ ಶುಗರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಚಾರ್ಯ ಆಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ತಾಯಿ ರುಕ್ಕಿಣಿ ಗೃಹಿಣಿ. ಸಹೋದರಿ ಕೀರ್ತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಆಗಿದ್ದಾರೆ.
ಇದನ್ನೂ ಓದಿ : ಈ ಬಜೆಟ್ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ



















