ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2025) ಖಾಲಿ ಇರುವ 16 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದಕ್ಕೂ ಮೊದಲು ಜೂನ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಆದರೆ, ಈಗ ಗಡುವನ್ನು ಜುಲೈ 15ರವರೆಗೆ ವಿಸ್ತರಣೆ ಮಾಡಿರುವ ಕಾರಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗಲಿದೆ.
ಡೈರೆಕ್ಟರ್, ಅಸಿಸ್ಟಂಟ್ ಡೈರೆಕ್ಟರ್, ಡೆಪ್ಯುಟಿ ಡೈರೆಕ್ಟರ್ ಹಾಗೂ ಸೆಕ್ಷನ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 47,600 ರೂ.ನಿಂದ 2.15 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಒಟ್ಟು ಹುದ್ದೆಗಳು: 16
ಉದ್ಯೋಗ ಸ್ಥಳ: ಬೆಂಗಳೂರು, ದಿಲ್ಲಿ, ಮುಂಬೈ ಹಾಗೂ ಹೈದರಾಬಾದ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ recruitment-tc@uidai.net.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಗಡುವಿನೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಡೈರೆಕ್ಟರ್, ಅಸಿಸ್ಟಂಟ್ ಡೈರೆಕ್ಟರ್
Director (HR), Unique Identification Authority of India, Bangla Sahib Road, Behind Kali Mandir, Gole Market, New Delhi – 110001
ಸೆಕ್ಷನ್ ಆಫೀಸರ್ ಹುದ್ದೆಗಳಿಗೆ-
Director (HR), Unique Identification Authority of India (UIDAI), Regional Office Mumbai, 7th Floor, MTNL Telephone Exchange, GD Somani Marg, Cuffe Parade, Colaba, Mumbai – 400005
ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ-
Director (HR), Unique Identification Authority of India (UIDAI), Regional Office, 6th Floor, East Block, Swarna Jayanthi Complex, Beside Matrivanam, Ameerpet Hyderabad-500038



















