ನವ ದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಸೆ.3 ಹಾಗೂ 4ರಂದು ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ 56ನೇ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಂಡಳಿಯ ಸದಸ್ಯರಿಗೆ ಸೂಚನೆ ನೀಡಲಾಗಿದೆ.
ಮಂಡಳಿ ಸಭೆಯ ನಿಮಿತ್ತ ಸೆ.2ರಂದು ಅಧಿಕಾರಿಗಳ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಹಣಕಾಸು ಸಚಿವರು, ಆರೋಗ್ಯ ವಿಮೆ, ಜೀವ ವಿಮೆ ಹಾಗೂ ಪರಿಹಾರ ಸೆಸ್ ಬಗ್ಗೆ ಸಚಿವರ ಗುಂಪು ನೀಡಿರುವ ಶಿಫಾರಸಿನ ಮೇಲೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.