ಮೈಸೂರು : ಕಾವೇರಿ ನದಿಯಲ್ಲಿ ಮುಳುಗಿ 6 ಜನ ಮೃತಪಟ್ಟಿರುವ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದ ವೇಳೆ ನದಿಗೆ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13), ಮೃತ ದೂರ್ದೈವಿಗಳು, ಇನ್ನೊಬ್ಬರ ಗುರುತು ಪತ್ತೆ ಆಗಿಲ್ಲ.
ಇಂದು ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಉರೂಸ್ ಹಿನ್ನೆಲೆ ದರ್ಗಾಕ್ಕೆ ಬೆಂಗಳೂರು ಮತ್ತು ಊಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಂಟು ಜನರ ತಂಡವೊಂದು ಅರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಗೆ ಈಜಲು ತೆರಳಿದ್ದಾರೆ.
ಈ ವೇಳೆ ನದಿಯಲ್ಲಿ ಮುಳುಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಉಳಿದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ; ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?


















