ಮುಂಬೈ : ಮಹಾರಾಷ್ಟ್ರದ ಬಾರಾಮತಿ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಪ್ರಕಟಿಸಿದೆ.
ಮುಂಬೈನಿಂದ ಬೆಳಿಗ್ಗೆ 8.10ಕ್ಕೆ ಹೊರಟಿದ್ದ ಲಿಯರ್‌ಜೆಟ್-45 ಮಾದರಿಯ ಸಣ್ಣ ಏರ್‌ಕ್ರಾಫ್ಟ್ ಬಾರಾಮತಿಗೆ ಪ್ರಯಾಣಿಸುತ್ತಿದ್ದಾಗ ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡು ಹೊಲದಲ್ಲಿ ಅಪಘಾತಕ್ಕೆ ಒಳಗಾಗಿದೆ. ಈ ಘಟನೆಯಲ್ಲಿ ಪವಾರ್ ತಮ್ಮ ಪಿಎಸ್ಓ ಮತ್ತು ಏರ್‌ಕೋ ಸಿಬ್ಬಂದಿಯೊಂದಿಗೆ ಇದ್ದರು. ಯಾರೂ ಬದುಕುಳಿದಿಲ್ಲ ಎಂದು ಡಿಜಿಸಿಎ ತಿಳಿಸಿದ್ದಾರೆ.
ಘಟನೆ ಬೆಳಗ್ಗೆ 8.30ಕ್ಕೆ ಸಂಭವಿಸಿದ್ದು, ಸಂಬಂಧಿಸಿದ ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತಲುಪಿರುವರು. ವಿಮಾನ ಘಟನೆ ಬಗ್ಗೆ ಹೆಚ್ಚಿನ ತನಿಖೆಯನ್ನು ಡಿಜಿಸಿಎ ಆರಂಭಿಸಿದೆ.
ಈ ಬಾರಿ ಬಾರಾಮತಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಮಧ್ಯೆ, ಪವಾರ್ ಅವರು ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಪ್ಲಾನ್ ಹೊಂದಿದ್ದರು. ಆದರೆ ಅವರು ಮುಂಬೈನಿಂದ ಪ್ರಯಾಣಿಸುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ.
ಇದನ್ನೂ ಓದಿ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ!


















