ಶಿವಮೊಗ್ಗ : ಹೃದಯಾಘಾತದಿಂದ ಆರು ವರ್ಷದ ಬಾಲಕ ಮೃತಪಟ್ಟಿರುವ ಆಘಾತಕಾರಿ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದಲ್ಲಿ ನಡೆದಿದೆ.
ತ್ರಿಲೋಕ್ ಜೈನ್ (6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್ ಜೈನ್, ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ.
ಶನಿವಾರ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ತ್ರಿಲೋಕ್ ಜೈನ್ ಏಕಾಏಕಿ ಕುಸಿದು ಬಿದ್ದಿದ್ದು, ಕುಟುಂಬಸ್ಥರು ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ವೈದ್ಯರು ಪರೀಕ್ಷಿಸಿದ ಬಳಿಕ ಬಾಲಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಸದ್ಯ ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮುಖ್ಯ ಶಿಕ್ಷಕರು ತ್ರಿಲೋಕ್ ಜೈನ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ : ಕಲುಷಿತ ಆಹಾರ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ – ವಾರ್ಡನ್, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ!



















