ಬೆಂಗಳೂರು: ನೀವೇನಾದರೂ ಮೈಸೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಮೈಸೂರಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Mysore Recruitment 2026) ಖಾಲಿ ಇರುವ 67 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು
ಹುದ್ದೆ ಹೆಸರು: ಮೆಡಿಕಲ್ ಹಾಗೂ ನರ್ಸಿಂಗ್ ಆಫೀಸರ್
ಒಟ್ಟು ಹುದ್ದೆ: 67
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 27
ಪೀಡಿಯಾಟ್ರಿಶಿಯನ್, ನರ್ಸಿಂಗ್ ಆಫೀಸರ್ಸ್, ಫಿಸಿಶಿಯನ್, ಮೆಡಿಕಲ್ ಆಫೀಸರ್ಸ್, ಹೆಲ್ತ್ ಇನ್ಸ್ ಪೆಕ್ಟರ್ಸ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ, ಬಿಡಿಎಂ, ಎಂಬಿಬಿಎಸ್, ಎಂಪಿಎಚ್, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ mysore.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















