ವಿಜಯನಗರ:ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಒಟ್ಲಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಎಡವಟ್ಟಿನಿಂದಾಗಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 7 ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಗ್ರಾಮದ ರೈತ ಗಂಗಪ್ಪ ಸಾರಥಿ ಅವರ 2 ಎಕರೆ, ಚಿಕ್ಕಬಿದರಿ ಮಲ್ಲೇಶ್ ಅವರ 2 ಎಕರೆ ಹಾಗೂ ಕಡತಿ ಶೇಖಪ್ಪ ಅವರ 3 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿ ರೈತರು ದಿಕ್ಕು ತೋಚದಂತೆ ಕಂಗಾಲಾಗಿದ್ದಾರೆ.
ಕಳೆದ 2025ರಲ್ಲೂ ಇದೇ ರೀತಿಯ ಅವಘಡ ಸಂಭವಿಸಿದ್ದರೂ, ಎಚ್ಚೆತ್ತುಕೊಳ್ಳದ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಸ್ಥಳೀಯ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಕೂಡಲೇ ಸೂಕ್ತ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಇದನ್ನೂ ಓದಿ:ವಿಕಲಚೇತನ ಕ್ರಿಕೆಟಿಗರಿಗೆ ನೆರವಾಗುವಂತೆ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ BCCI ಸೂಚನೆ: ಸಮಾನಾವಕಾಶಕ್ಕೆ ಒತ್ತು



















