ಬೆಂಗಳೂರು : ನಗರದ ಡೈರಿ ಸರ್ಕಲ್ ಮೇಲ್ಸೇತುವೆಯಲ್ಲಿ ನಡೆದ ‘ಕ್ಯಾಶ್ ಮ್ಯಾನೇಜ್‌ಮೆಂಟ್ ಸರ್ವೀಸ್’ ಕಂಪನಿ ವಾಹನದಿಂದ 7 ಕೋಟಿ ಹಣ ದರೋಡೆ ಕೇಸ್‌ನಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಿರುಪತಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಬಾಣಸವಾಡಿಯ ಹೇಮಂತ್, ಸುನೀಲ್ ಎಂಬ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಿನ್ನೆ ಮಧ್ಯಾಹ್ನ ಸಿಎಂಎಸ್ ವಾಹನದಲ್ಲಿ ಸಾಗಿಸುತ್ತಿದ್ದ ಹಣವನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ಬೆಂಗಳೂರು ಸಿಟಿ ಬಿಟ್ಟು, ತಿರುಪತಿಗೆ ಪರಾರಿಯಾಗಿದ್ದರು.
ಈಗ ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಬೆಂಗಳೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಂಬರ್ ಪ್ಲೇಟ್ ಬದಲಿಸಿ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ನಂಜನಗೂಡಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ.. ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿ!



















