ರಾಯಚೂರು: ಮನೆಯಲ್ಲಿ ಮಾಡಿದ್ದ ಊಟ ಸೇವಿಸಿದ ನಂತರ ಒಂದೇ ಕುಟುಂಬದ 7 ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಮಿನಗಡ ಗ್ರಾಮದಲ್ಲಿ ನಡೆದಿದೆ. ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿದ 7 ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜನರಲ್ಲಿ ತೀವ್ರವಾಗಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಶುಕ್ರವಾರ ಬೆಳಗ್ಗೆ ಎಲ್ಲರೂ ಹೊಲದಲ್ಲೇ ಕುಳಿತು ಊಟ ಮಾಡಿದ್ದರು. ಊಟದ ನಂತರ ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಏಳು ಜನರಿಗೆ ಲಿಂಗಸಗೂರು ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಆರೋಗ್ಯ ಪಸ್ವಸ್ಥರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.