ಬೆಂಗಳೂರು: ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (RCFL Recruitment 2025) 74 ಹುದ್ದೆಗಳು ಖಾಲಿ ಇವೆ. ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ, ಬಿಎಸ್ಸಿ ಪದವೀಧರರು ಕೂಡಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಯಾವ ಹುದ್ದೆಗಳು ಎಷ್ಟು ಖಾಲಿ?
ಆಪರೇಟರ್ ಟ್ರೈನಿ – 54, ಬಾಯ್ಲರ್ ಆಪರೇಟರ್ – 3, ಜೂನಿಯರ್ ಫೈರ್ಮ್ಯಾನ್ – 2, ನರ್ಸ್ – 1, ಟೆಕ್ನೀನಿಶಿಯನ್ (ಇನ್ಸ್ಟ್ರುಮೆಂಟೇಶನ್) ಟ್ರೈನಿ – 4, ಟೆಕ್ನೀಶಿಯನ್ (ಎಲೆಕ್ಟ್ರಿಕಲ್) ಟ್ರೈನಿ – 2 ಮತ್ತು ಟೆಕ್ನೀಶಿಯನ್ (ಮೆಕ್ಯಾನಿಕಲ್) ಟ್ರೈನಿ – 8 ಹುದ್ದೆಗಳಿವೆ. ಬಿ.ಎಸ್ಸಿ, ಡಿಪ್ಲೋಮಾ ಪೂರೈಸಿದವರು, ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು https://ibpsonline.ibps.in/rcfdece24/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಮಹಾರಾಷ್ಟ್ರದ ರಾಯಗಢದಲ್ಲಿ ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ ಸಂಸ್ಥೆಯ ಕೇಂದ್ರ ಕಚೇರಿ ಇದೆ. ನೇಮಕಾತಿ ಹೊಂದಿದ ಅಭ್ಯರ್ಥಿಗಳು ಇಲ್ಲಿಯೇ ಕೆಲಸ ಮಾಡಬೇಕಾಗುತ್ತದೆ. ಆಯಾ ಹುದ್ದೆಗಳಿಗೆ ತಕ್ಕ ಹಾಗೆ ವೇತನ ನೀಡಲಾಗುತ್ತದೆ.
ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 2 ವರ್ಷಗಳ ಸಡಿಲಿಕೆ ಇದೆ. ಎಸ್ಸಿ/ ಎಸ್ಟಿ/ ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು 700 ರೂ. ಪಾವತಿಸಬೇಕು.