ಬಾಗಲಕೋಟೆ : 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ನವನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ನಡೆಯಿತು. ಪೊಲೀಸ್, ಗೃಹರಕ್ಷಕ ದಳ ಸೇರಿದಂತೆ ವಿವಿಧ ಪಡೆಗಳ ಪಥಸಂಚಲನ ಜನಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ಎಂಎಲ್ಸಿ ಪಿ.ಎಚ್. ಪೂಜಾರ್ ಸೇರಿದಂತೆ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಗಣರಾಜ್ಯೋತ್ಸವದ ಸಂಭ್ರಮವು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದೇಶಭಕ್ತಿ ಉತ್ಸಾಹವನ್ನು ಮೂಡಿಸಿತು.
ಇದನ್ನೂ ಓದಿ : ರಾಜ್ಯ ರಾಜಧಾನಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರಿಂದ ಧ್ವಜಾರೋಹಣ



















