ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು. ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರು ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು.
ಬಳಿಕ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಜೀ ಅವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ಜ್ಯೋತಿ ಪಾಟೀಲ್, ವಿರೋಧ ಪಕ್ಷದ ನಾಯಕ ಇಮ್ರಾನ್ ಎಲ್ಲಿಗಾರ ಮತ್ತಿತರರು ಭಾಗಿಯಾಗಿದ್ದರು.