ಬೆಂಗಳೂರು, ಜು.3 : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಿಸುವ ಕಾರ್ಯವನ್ನು ಮುಂದುವರಿಸಿದ್ದಾರೆ.
ಜೂನ್ 30ರಿಂದ ಆರಂಭಗೊಂಡಿರುವ ಈ ವಿಶೇಷ ಅಭಿಯಾನದಲ್ಲಿ ಮೊದಲ ಮೂರು ದಿನಗಳಲ್ಲೇ ಒಟ್ಟು 8,65,118 ಗಣತಿ ನಮೂನೆಗಳು ಮತದಾರರಿಗೆ ವಿತರಿಸಲಾಗಿದೆ ಎಂದು ಜಿಬಿಎ ತಿಳಿಸಿದೆ.
ವಲಯವಾರು ವಿತರಣೆ ಹೀಗಿದೆ :
ಕೇಂದ್ರ – 1,88,928
ಉತ್ತರ – 1,81,458
ದಕ್ಷಿಣ – 1,58,783
ಬೆಂಗಳೂರು – 3,35,949
ಇನ್ನು, ಜುಲೈ 29ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಮತದಾರರು ಅಗತ್ಯ ದಾಖಲೆಗಳೊಂದಿಗೆ ಬಿಎಲ್‌ಒಗಳಿಗೆ ಸಹಕರಿಸಿ, ಭರ್ತಿ ಮಾಡಿದ ನಮೂನೆಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಜಿಬಿಎ ಮನವಿ ಮಾಡಿದೆ.
ಇದನ್ನೂ ಓದಿ : ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!



















