ರಾಯಚೂರು: ಮೇ 29 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಹೀಗಾಗಿ ಆರ್ ಸಿಬಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಗೆಲುವಿನ ಸಂಭ್ರಮದ ವೇಳೆ ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದರು. ಹೀಗಾಗಿ ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಭಿಮಾನಿಗಳು, ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಪಟಾಕಿ ಇಟ್ಟು, ಪೆಟ್ರೋಲ್ ತುಂಬಿ, ಮೈದಾ ಹಿಟ್ಟು ಬಳಸಿ ಸ್ಫೋಟಿಸಿದ್ದರು. ಯುವಕರ ಹುಚ್ಚಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿಂಧನೂರಿನ ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಜನರನ್ನು ಅರೆಸ್ಟ್ ಮಾಡಿದ್ದಾರೆ. ಗುರುರಾಜ, ಹಜರತ್, ರಮೇಶ್, ದೇವಯ್ಯ ಸೇರಿದಂತೆ 8 ಜನ ಅರೆಸ್ಟ್ ಆಗಿದ್ದಾರೆ.