ಬಳ್ಳಾರಿ: ವೈದರ ನಿರ್ಲಕ್ಷ್ಯಕ್ಕೆ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಅಂದ್ರಾಳ ಗ್ರಾಮದ ರವಿ ಮತ್ತು ಶಾಂತ ದಂಪತಿಗಳ ಮಗ ಅರುಣ್ ಸಾವನ್ನಪ್ಪಿದ್ದು, ಆಸ್ಪತ್ರೆಯ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬಾಲಕನಿಗೆ ಅಪೆಂಡಿಕ್ಸ್ ಅಪರೇಷನ್ ಮಾಡಲಾಗಿತ್ತು. ಆದರೆ ಮತ್ತೊಮ್ಮೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಮತ್ತೆ ಆಪರೇಷನ್ ಮಾದರಿಯಲ್ಲಿಯೇ ಚಿಕಿತ್ಸೆ ನೀಡಿದ್ದಾರೆ. ಅದು ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.
ಸಕಾಲಕ್ಕೆ ಮಗುವಿಗೆ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ತೋರಿದ್ದರಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರ ಆರೋಪಿಸಿ, ವಿಮ್ಸ್ ಆಸ್ಪತ್ರೆಯ ಮುಂದೆ ಕೆಲ ಕಾಲ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಪ್ರತಿಭಟನೆಕಾರರನ್ನು ಮನವೊಲಿಸಿ ಕಳುಹಿಸಿದ್ದಾರೆ.
ಇದನ್ನೂ ಓದಿ: ಕೋಲಾರ | ಡಿವೈಡರ್‌ಗೆ ಕಾರು ಡಿಕ್ಕಿ, ನಾಲ್ವರು ಸಾವು



















